Site icon PowerTV

ತಂಗಿ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ.

ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ ಹೂತು ಹಾಕಿದ್ದಾಳೆ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚನೆ : ಹೊಸ ಪ್ರೇಯಸಿಗಾಗಿ ಹಳೇ ಲವರ್ ಗೆ ಚಿತ್ರಹಿಂಸೆ, ವಿಕೃತ…

ಅಂಬಿಕಾಳ ಅನೈತಿಕ ಸಂಬಂಧಗಳಿಗೆ ತಂಗಿ ಅನಿತಾ ಅಡ್ಡಿಯಾಗುತ್ತಿದ್ದಳು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಅಂಬಿಕಾ, ತಂಗಿ ಮೇಲಿನ ಕೋಪಕ್ಕೆ ಆಕೆ ಮಗನನ್ನು ಕೊಲೆ ಮಾಡಿದ್ದಾಳೆ. ಸ್ಥಳಕ್ಕೆ ಪೆರೆಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version