Site icon PowerTV

ನಾವು ಬೆಂಗಳೂರು ಜಿಲ್ಲೆಯವರು, ಎಲ್ಲದಕ್ಕೂ ಕಾಲ ಕೂಡಿ ಬರುತ್ತದೆ : ಡಿ.ಕೆ. ಶಿವಕುಮಾರ್

ರಾಮನಗರ : ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರ್ಪಡೆ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಪುನರುಚ್ಚರಿಸಿದರು. ‘ನಾವು ಬೆಂಗಳೂರು ಜಿಲ್ಲೆಯವರು. ಎಲ್ಲದಕ್ಕೂ ಕಾಲ ಕೂಡಿ ಬರುತ್ತದೆ. ಬಗ್ಗೆ ಸಿಎಂ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರು ಅಂದ ತಕ್ಷಣ ಎಷ್ಟೊಂದು ಕಾಂಟ್ರವರ್ಸಿ ಆಯ್ತು. ಹಲವರು ವಿರೋಧ ಮಾಡಿದ್ರು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.

ರಾಮನಗರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಮನಗರ ಹಾಗೂ ಕನಕಪುರ ಎರಡು ಕಡೆ ಮೆಡಿಕಲ್ ಕಾಲೇಜು ಕೇಳಿದ್ದೇವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕೆಲ ಕಾನೂನುಗಳು, ರೂಲ್ಸ್ ಗಳಿವೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಪರಿಹಾರ ಕೇಳಿದ ರೈತನ ಮೇಲೆ ಸಂಸದ ಡಿ.ಕೆ.ಸುರೇಶ್ ಗರಂ

ಕನಕಪುರಕ್ಕೆ ಮೆಡಿಕಲ್ ಕಾಲೇಜು

ಜಿಲ್ಲೆಗೆ ಒಂದು‌ ಮೆಡಿಕಲ್ ಕಾಲೇಜು ಎನ್ನುವ ನಿಯಮ ಇದೆ. ಆ ನಿಯಮದನ್ವಯ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಕೊಡಿ ಅಂತ ಕೇಳಿದ್ದೇವೆ. ಯೂನಿವರ್ಸಿಟಿ (ವಿಶ್ವವಿದ್ಯಾನಿಲಯ) ಪಾಡಿಗೆ ಯೂನಿವರ್ಸಿಟಿ ಆಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Exit mobile version