Saturday, August 23, 2025
Google search engine
HomeUncategorizedFoeticide Case : ಹತ್ಯೆ ಮಾಡಿ ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದೆವು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ...

Foeticide Case : ಹತ್ಯೆ ಮಾಡಿ ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದೆವು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ ದಿನಕ್ಕೊಂದು ಟ್ವೇಸ್ಟ್ ಪಡೆದುಕೊಳ್ಳುತ್ತಿದೆ.ಈ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಡಾ ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಆ ಮೂಲಕ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಬಂಧಿತ ಆರೋಪಿ ಆಗಿದ್ದಾಳೆ.

ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ: ಕರ್ನಾಟಕದಲ್ಲಿ ನಯಾ ಪೈಸೆ ಹುಟ್ಟದಂತೆ ಮಾಡಿದ್ದಾರೆ : ಬಸವರಾಜ ಬೊಮ್ಮಾಯಿ ಕಿಡಿ 

ಸ್ಪೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್​ 

ವಿಚಾರಣೆ್ಯ ವೇಳೆಯಲ್ಲಿ ಬೆಚ್ಚಿಬೀಳಿಸುವಂತಹ ವಿಷಯವನ್ನ ಬಹಿರಂಗಪಡಿಸಿದ್ಧಾಳೆ. ಡಾಕ್ಟರ್​ ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ಹೇಳಿದ್ದಾಳೆ.

70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ

ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಅಬಾರ್ಷನ್ ಮಾಡಿದ್ದೇನೆ.

ಹತ್ಯೆ ಮಾಡಿ ಮಗುವನ್ನು ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು

ನಿಸಾರ್ ಮಗುವನ್ನು ಕಾವೇರಿ ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಹೀಗಾಗಿ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ. ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಮೆಷಿನ್ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರೋದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಅಬಾರ್ಷನ್ ಮಾಡಲಾಗುತ್ತಿತ್ತು.

ಏನಿದು ಪ್ರಕರಣ?

ಅಕ್ಟೋಬರ್​​ನಲ್ಲಿ ಭ್ರೂಣ ಹತ್ಯೆ ಸಂಬಂಧ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ವೇಳೆ ಬೃಹತ್ ಜಾಲ ಇರುವುದು ಪತ್ತೆಯಾಗಿದೆ. ಅದರಂತೆ ವೈದ್ಯರು ಸೇರಿದಂತೆ 10 ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಾಗ ಎರಡು ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿದ ಆಘಾತಕಾರಿ ವಿಚಾರ ಬಹಿರಂಗವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments