Sunday, August 24, 2025
Google search engine
HomeUncategorizedಮಧು ಬಂಗಾರಪ್ಪ ಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ

ಮಧು ಬಂಗಾರಪ್ಪ ಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಇಂದಿನಿಂದ ಪ್ರೋ ಕಬಡ್ಡಿ ಸೀಸನ್​ 10 ಆರಂಭ!

ನಾವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು‌. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರೆಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments