Site icon PowerTV

Good News : ಬಾಹ್ಯಾಕಾಶದಲ್ಲಿ ಕಾರ್ಯಚರಣೆ ಆರಂಭಿಸಿದ Aditya-L1 Mission

ಬೆಂಗಳೂರು : ಸೂರ್ಯನ ಅಧ್ಯಯನಕ್ಕಾಗಿ ತೆರಳಿರುವ ಆದಿತ್ಯ-ಎಲ್​1 ನಿಂದ ಮತ್ತೊಂದು ಗುಡ್​ ನ್ಯೂಸ್ ಬಂದಿದೆ.

ಭಾರತದ ಆದಿತ್ಯ ಎಲ್-1 (Aditya-L1 Mission) ಉಪಗ್ರಹದಲ್ಲಿ ಸೋಲಾರ್ ವಿಂಡ್ ಪಾರ್ಟಿಕಲ್ ಎಕ್ಸ್‌ಪೆರಿಮೆಂಟ್ ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದೆ. ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಸೆಪ್ಟೆಂಬರ್ 2ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಆದಿತ್ಯ ಎಲ್-1 (Aditya-L1 Mission) ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು.

ಆದಿತ್ಯ ಎಲ್-1 (Aditya-L1 Mission) ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿ.ಮೀ ದೂರದಲ್ಲಿರುವ ಮೊದಲ ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್ ಸುತ್ತ ಕರೋನಲ್ ಕಕ್ಷೆಯಿಂದ ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಭಾರತೀಯ ಬಾಹ್ಯಾಕಾಶ-ಆಧಾರಿತ ವೀಕ್ಷಣಾಲಯವಾಗಿದೆ.

Exit mobile version