Site icon PowerTV

ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ : ಅರ್ಷದೀಪ್ ಇನ್, ದೀಪಕ್ ಚಹಾರ್ ಔಟ್

ಬೆಂಗಳೂರು : ಭಾರತ ವಿರುದ್ಧದ ಐದನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಮೊದಲು ಬೌಲಿಂಗ್ (ಫೀಲ್ಡಿಂಗ್) ಆಯ್ಕೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ 5 ಪಂದ್ಯಗಳ ಟಿ-20 ಸರಣಿಯಲ್ಲಿ ಈಗಾಗಲೇ 3-1 ಅಂತರದಿಂದ ಮುನ್ನಡೆ ಸಾಧಿಸಿ, ಸರಣಿ ವಶಪಡಿಸಿಕೊಂಡಿದೆ.

ಭಾರತ ತಂಡ ಬೆಂಗಳೂರಿನಲ್ಲಿ ಈವರೆಗೆ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾ ತಂಡ ಈ ಕ್ರೀಡಾಂಗಣದಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ಬೀಗಿದೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯ್

ಆಸ್ಟ್ರೇಲಿಯ ತಂಡ

ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

Exit mobile version