Site icon PowerTV

ಕ್ಯಾಥೋಲಿಕ್​ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಬಾಂಬ್​ ದಾಳಿ: 4 ಸಾವು

ಮನಿಲಾ: ಪಿಲಿಪೈನ್ಸ್​ ದೇಶದ ದಕ್ಷಿಣ ಭಾಗದಲ್ಲಿರುವ ವಿಶ್ವವಿದ್ಯಾಲಯದ ಜಿಮ್ಯಾಷಿಯಮ್‌ನಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಕ್ಯಾಥೋಲಿಕ್ ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಭಯೋತ್ಪಾದಕರು ಬಾಂಬ್​ ದಾಳಿ ನಡೆಸಿದ್ದು ದಾಳಿಯಲ್ಲಿ ಕನಿಷ್ಠ ನಾಲ್ಕು ಜನ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಪ್ರಭಲ ಭೂಕಂಪದಿಂದ ಸುನಾಮಿ ಭೀತಿ ಎದುರಿಸುತ್ತಿದ್ದ ಫಿಲಿಪಿನ್ಸ್, ಭಾನುವಾರ ಬೆಳಿಗ್ಗೆ ಭಯೋತ್ಪಾದಕರ ದಾಳಿಗೆ ನಲುಗಿದೆ. ಮುಸ್ಲಿಂ ಭಯೋತ್ಪಾದಕರ ಕೃತ್ಯ ಎಂದು ಅಲ್ಲಿನ ಪೊಲೀಸರು ಹೇಳಿದ್ದು, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶ: ಮತ್ತೊಮ್ಮೆ ಮೋದಿ ಪ್ರಧಾನಿ ಗ್ಯಾರೆಂಟಿ – ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಫರ್ಡಿನಂಡ್ ಮಾರ್ಕೊಸ್ ಜೂನಿಯರ್, ವಿದೇಶಿ ಭಯೋತ್ಪಾದಕರ ಪ್ರಜ್ಞಾಶೂನ್ಯ ಹಾಗೂ ಅತ್ಯಂತ ಹೇಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ಧರ ಮೇಲೆ ಹಿಂಸಾಚಾರ ನಡೆಸಿರುವ ತೀವ್ರವಾದಿಗಳು ನಮ್ಮ ಸಮಾಜದ ಶತ್ರುಗಳೇ ಆಗಿದ್ದಾರೆ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

Exit mobile version