Site icon PowerTV

ಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಡಾಲಿ ಧನಂಜಯ ಆಯ್ಕೆ

ಬೆಂಗಳೂರು : ನಟ ಡಾಲಿ ಧನಂಜಯ ಅವರು ಲಿಡ್ಕರ್ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ನಾಳೆ ವಿಧಾನ ಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ. ಶಿವಕುಮಾರ್ ಹಾಗೂ ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ.

ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ. ನಟ‌ರಾಕ್ಷಸ  ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ.

Exit mobile version