Site icon PowerTV

BY ವಿಜಯೇಂದ್ರ ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು ಪತ್ತೆ!

ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ‌ ಮೇಲೆ‌ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ.

ಇದನ್ನೂ ಓದಿ: ಯಂತ್ರಕ್ಕೆ ತಲೆ ಸಿಲುಕಿ ಕಾರ್ಮಿಕ ಧಾರುಣ ಸಾವು!

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ 300 ಗ್ರಾಂ ಚಿನ್ನಾಭರಣ 3 ಲಕ್ಷ ನಗದು ಹಣ ಪತ್ತೆಯಾಗಿದೆ. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Exit mobile version