Site icon PowerTV

ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅಂತ ಹೇಳಬೇಕಾಗುತ್ತದೆ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಈ ದೇಶದ ಸಂಪತ್ತು ಮುಸ್ಲಿಮರಿಗೂ ಸೇರಬೇಕೆಂಬ ಸಿಎಂ ಸಿದ್ದರಾಮಯ್ಯರ ಮುಸ್ಲಿಂ ಓಲೈಕೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾವ ಸಮಾವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ. ಮತ್ತು ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅನ್ನೋದು ಹೇಳಬೇಕಾಗುತ್ತದೆ. ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ, ಇದರಲ್ಲಿ ತಪ್ಪು ಹುಡುಕೋ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಹೇಳಿದ್ದಾರೆ.

ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲಿ, ಯಾವುದೇ ಸಂಸ್ಥೆಯಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ. ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ವಿಚಾರ ಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗುತ್ತಿದೆ. ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮದ ಜನರಿಗೂ ನಾವು ಸಮಾನ ರಕ್ಷಣೆ ನೀಡುತ್ತೇವೆ. ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Exit mobile version