Site icon PowerTV

ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ : ಕುಮಾರಸ್ವಾಮಿ ವಾರ್ನಿಂಗ್

ಬೆಳಗಾವಿ : ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಡಳಿತರೂಢ ಕಾಂಗ್ರೆಸ್​ ಪಕ್ಷದ ಸದಸ್ಯರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನನ್ನ ಆದ್ಯತೆ. ಈ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಭಾಗದ ಜನರು ಸಾಕಷ್ಟು ನಿರೀಕ್ಷೆ ಇಟ್ಟಿಕೊಂಡಿದ್ದಾರೆ. ಆ ಬಗ್ಗೆ ನಾವು ಬಿಜೆಪಿ ಜಂಟಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅಧಿಕೃತ ವಿರೋಧ ಪಕ್ಷ. ಜನವರಿಯಲ್ಲಿ ಜಂಟಿ ಅಧಿವೇಶನ ಇದೆ. ಅಲ್ಲಿ ಬೇರೆ ಬೇರೆ ವಿಚಾರಗಳ‌ ಬಗ್ಗೆ ಮಾತನಾಡುತ್ತೇನೆ. ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಅವತ್ತು ಮಾತನಾಡುತ್ತೇನೆ. ಸರ್ಕಾರ ಬಂದು ಇನ್ನು ಆರು ತಿಂಗಳ ಆಗಿದೆ. ಇನ್ನು ನಾಲ್ಕುವರೆ ವರ್ಷ ಸರ್ಕಾರ ಇರುತ್ತೆ. ಹಂತ ಹಂತವಾಗಿ ಎಲ್ಲ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿ ಅಂತ ಅನೇಕ ಜನರು ಈ ಬಗ್ಗೆ ಹೇಳಿದ್ದಾರೆ. ಬಲಿಷ್ಟ ನಾಯಕತ್ವ ಬೇಕು ಅಂತ ಜನರು ಹೇಳುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Exit mobile version