Site icon PowerTV

ರಜಪೂತ ಕರ್ಣಿ ಸೇನೆ ಅಧ್ಯಕ್ಷನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು!

ರಾಜಸ್ಥಾನ: ನಗರದ ಶ್ಯಾಮ್​ ನಗರದಲ್ಲಿರುವ ಗೊಗಮೆಡಿ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್​ ಸಿಂಗ್​ ಗೋಗಮೇಡಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ವೇಳೆ ಗೋಗಮೆಡಿಯವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

ಘಟನೆಯಲ್ಲಿ ಗುಂಡಿನದಾಳಿಗೊಳಗಾಗಿದ್ದ ‘ಗೊಗಮೆಡಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ’ ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಪಿಟಿಐಗೆ ತಿಳಿಸಿದ್ದಾರೆ.

Exit mobile version