Site icon PowerTV

ವಾತಾವರಣದಲ್ಲಿ ಏರುಪೇರು: ವಾರಾಂತ್ಯದಲ್ಲಿ ಮಳೆಯ ಅಲರ್ಟ್​ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ರಾಜ್ಯಾದ್ಯಂತ ವಾತಾವರಣದಲ್ಲಿ ಏರುಪೇರಾಗಲಿದ್ದು ವಾರಾಂತ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಒಣಹವೆ ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸದ್ಯ ಒಣಹವೆ ಇದ್ದು, ಶನಿವಾರ ಹಗುರ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣ ಇದ್ದು, ಮುಂಜಾನೆ ಮಂಜು ಕವಿದ ವಾತಾವರಣ ಇದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ ವಿಜಯಪುರದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕನ್ನಡಿಗರಿಗೆ ಸಿಹಿಸುದ್ದಿ: ಲೋಕಸಭಾ ಕಲಾಪಕ್ಕೆ ಕನ್ನಡದ ಸೊಗಡು!

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಡಿಸೆಂಬರ್‌ 9, 10 ಶನಿವಾರ-ಭಾನುವಾರದಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version