Site icon PowerTV

ಭೀಕರ ಅಪಘಾತ : ನಾಲ್ವರ ಉಸಿರು ಕಸಿದ ಕಿಲ್ಲರ್ ಲಾರಿ

ರಾಯಚೂರು : ರಾಜ್ಯಕ್ಕೆ ಇಂದು ಕರಾಳ ದಿನ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರೆ, ರಾಯಚೂರಿನಲ್ಲಿ ಲಾರಿ ಅಪಘಾತದಿಂದ ನಾಲ್ವರು ಕೊನೆಯುಸಿರೆಳೆದಿದ್ದಾರೆ.

ಟಾಟಾ ಏಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ಮಾರ್ಗದ ಮಧ್ಯದಲ್ಲಿರುವ ಪಗಡದಿನ್ನಿ ಕ್ಯಾಂಪ್ ಬಳಿ ಅಪಘಾತ ನಡೆದಿದೆ.

ಮುಂದೆ ಹೋಗುತ್ತಿದ್ದ ಗಾಡಿ ಓವರ್ ಟೇಕ್ ಮಾಡಲು ಹೋಗಿ, ಮದುವೆ ಡೆಕೋರೇಟ್ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಟಾಟಾ ಏಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಸ್ಮಾಯಿಲ್ (25), ಚನ್ನಬಸವ (26), ಅಂಬರೀಶ್ (20) ಹಾಗೂ ರವಿ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಿಂಧನೂರು ತಾಲೂಕ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಪರಿಶೀಲನೆ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಮೃತದೇಹಗಳನ್ನು ಶವ ಪರೀಕ್ಷೆಗಾಗಿ ಸಿಂಧನೂರು ಶವಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version