Site icon PowerTV

ನಾವು 143 ಭರವಸೆಗಳಲ್ಲಿ 83 ಕಾರ್ಯಕ್ರಮ ಜಾರಿಗೊಳಿಸಿದ್ದೇವೆ : ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್​ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈಗಾಗಲೇ 4 ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. 5ನೇ ಗ್ಯಾರಂಟಿಯಾದ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ​ದ ಆಡಳಿತ ಕೇವಲ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದು ಹೇಳಿದ್ದಾರೆ.

ಫಲಾನುಭವಿಗಳ ಖಾತೆಗೆ 2,444 ಕೋಟಿ ಜಮೆ

ಬಡ ಕುಟುಂಬಗಳ ಪ್ರತಿ ಫಲಾನುಭವಿಗಳಿಗೆ ಮಾಸಿಕ (ತಿಂಗಳಿಗೆ) 10 ಕಿಲೋ ಅಕ್ಕಿ ನೀಡಲಾಗುತ್ತಿದೆ. ಅಕ್ಕಿಯ ಅಲಭ್ಯತೆಯ ಕಾರಣಕ್ಕಾಗಿ ತಲಾ 170 ರೂ. ಹಣ ವರ್ಗಾವಣೆ ಮಾಡಲಾಗುತ್ತಿದೆ. ಈವರೆಗೆ 3.29 ಕೋಟಿ ಫಲಾನುಭವಿಗಳ ಖಾತೆಗೆ 2,444 ಕೋಟಿ ರೂ. ಹಣ ಜಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Exit mobile version