Site icon PowerTV

ಪ್ರವಾಸಿಗರಿಗೆ ಸಿಹಿಸುದ್ದಿ: ಡಿ.11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು!

ಬೆಂಗಳೂರು: ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ.

ಬೆಂಗಳೂರಿನ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು ಕಾರ್ಯನಿರ್ವಹಿಸಲಿದೆ. ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ‌ ಕಂದಾಯ ನಿರೀಕ್ಷಕರ ಮೇಲೆ ಹಲ್ಲೆ!

ನಂದಿಬೆಟ್ಟದ ಜೊತೆಗೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಹೀಗಾಗಿ ಚಿಕ್ಕಬಳ್ಳಾಪುರಕ್ಕೆ ರೈಲು ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ.

Exit mobile version