Site icon PowerTV

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ತೆಲಂಗಾಣ ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕಾಗಿ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚಿಸಿದೆ. ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತೆಲಂಗಾಣ ರಾಜ್ಯಪಾಲೆ ತಮಿಳ್‌ಸಾಯಿ ಸೌಂದರ್ಯರಾಜನ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

11 ಸಚಿವರು ಪ್ರಮಾಣ ವಚನ ಸ್ವೀಕಾರ

ರೇವಂತ್ ರೆಡ್ಡಿ ಜೊತೆ 11 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಎಲ್‌.ಬಿ. ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಕರ್ನಾಟಕ ಸಿಎಂ ಸಿದ್ದರಾಮಯ್ಯ, DCM ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

Exit mobile version