Site icon PowerTV

ಇಂದು ತೆಲಂಗಾಣ ನೂತನ ಸಿಎಂ ಪದಗ್ರಹಣ: ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗಿ!

ತೆಲಂಗಾಣ: ನೂತನ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರ ಪದಗ್ರಹಣ ಸಮಾರಂಭ ಇಂದು ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕರ್ನಾಟಕದ ಅನೇಕ ಸಚಿವರ ದಂಡೇ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್‌ ಪಾಲ್ಗೊಳ್ಳುವುದು ಖಾತರಿಯಾಗಿದೆ. ಸಿಎಂ ಸಿದ್ದರಾಮಯ್ಯ ಇಂದು ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿ ಬಳಿಕ ತೆಲಂಗಾಣದಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ:  ಪಿಒಕೆ ನಮ್ಮದು.. ಕಾಶ್ಮೀರಕ್ಕಾಗಿ 24 ಸ್ಥಾನ ಮೀಸಲು : ಅಮಿತ್ ಶಾ

ಇನ್ನು ಸಚಿವ ಜಮೀರ್‌ ಅಹಮದ್‌ ತೆಲಂಗಾಣದಲ್ಲೇ ಇದ್ದಾರೆ. ಇವರ ಜೊತೆಗೆ ತೆಲಂಗಾಣ ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದ್ದ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಂ.ಸಿ.ಸುಧಾಕರ್‌, ನಾಗೇಂದ್ರ, ಎನ್‌.ಎಸ್‌.ಬೋಸರಾಜು, ಶಿವರಾಜ ತಂಗಡಗಿ, ರಾಮಲಿಂಗಾರೆಡ್ಡಿ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Exit mobile version