Site icon PowerTV

ಕ್ಷಣಮಾತ್ರದಲ್ಲಿ ನೆಲಕ್ಕುರುಳಿದ ಮೊಬೈಲ್​​ ಟವರ್​: ತಪ್ಪಿದ ಭಾರಿ ದುರಂತ

ಬೆಂಗಳೂರು: ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿದ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿನಗರದಲ್ಲಿ ನಡೆದಿದೆ.

ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣಕ್ಕಾಗಿ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವುತ್ತಿದ್ದಾಗ ಮೊಬೈಲ್ ಟವರ್ ಧರೆಗುರುಳಿದೆ. ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಕಬ್ಬಿಣದ ರಾಡ್​​ನಿಂದ ಥಳಿಸಿದ ಶಿಕ್ಷಕಿ!

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿದೆ.

Exit mobile version