Site icon PowerTV

ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್​ ರಾವ್​ ಆಸ್ಪತ್ರೆಗೆ ದಾಖಲು!

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕಾಲು ಜಾರಿ ಬಿದ್ದಿದ್ದು, ಅವರನ್ನು ಇಂದು ಮುಂಜಾನೆ 2 ಗಂಟೆ ವೇಳೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

69 ವರ್ಷದ ಕೆ.ಚಂದ್ರಶೇಖರ್ ರಾವ್ ಅವರು ಕಾಲು ಜಾರಿ ಬಿದ್ದಿರುವುದರಿಂದ ಮಂಡಿಯ ಮೂಳೆ ಮುರಿದಿರುವ ಸಾಧ್ಯತೆ ಇದ್ದು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಬೀಳಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಅವರನ್ನು ಶುಕ್ರವಾರ ಮುಂಜಾನೆ 2 ಗಂಟೆ ಸಮಯದಲ್ಲಿ ಹೈದರಾಬಾದ್ ನ ಯಶೋಧಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅಂದರ್!

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್​ ಅವರು ಅನಾರೋಗ್ಯ ಕುರಿತು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಈ ಪೋಸ್ಟ್​​ ನಲ್ಲಿ “ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್ ಅವರಿಗೆ ಗಾಯವಾಗಿದೆ ಎಂದು ತಿಳಿದು ಬೇಸರವಾಯಿತು. ನಾನು ಅವರ ಶೀಘ್ರ ಚೇತರಿಕೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಎಕ್ಸ್‌ ಸಾಮಾಜಿಕ ಮಾಧ್ಯಮದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

Exit mobile version