Site icon PowerTV

ಅಕ್ರಮ ಆಸ್ತಿ ಪ್ರಕರಣ: ಜಮೀರ್ ಮೇಲ್ಮನವಿ ವಿಚಾರಣೆ ನಿರಾಕರಿಸಿದ ಸುಪ್ರೀಂ!

ದೆಹಲಿ: ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ. ಜಾರಿ ನಿರ್ದೇಶನಾಲಯ ನೀಡಿದ್ದ ದಾಖಲೆಗಳ ಆಧಾರದ ಮೇಲೆ 2022 ರಲ್ಲಿ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿತ್ತು. ಬಳಿಕ ಜಮೀರ್ ಅಹ್ಮದ್ ಖಾನ್ ಆದಾಯದಲ್ಲಿ 2000 ಪರ್ಸೆಂಟ್​​​​ ಪಟ್ಟು ಏರಿಕೆಯಾಗಿದೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಸಾವಿಗೆ ಇಲಿ ಕಾರಣವಂತೆ!

ಆದಾಯ ಏರಿಕೆ ಬಗ್ಗೆ ಸದ್ಯ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಲೋಕಾಯುಕ್ತ ನಡೆಸುತ್ತಿರುವ ತನಿಖೆ ರದ್ದು ಕೋರಿ ಮೊದಲು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಅದನ್ನು ವಜಾ ಮಾಡಿತ್ತು. ಬಳಿಕ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತನಿಖೆಗೆ ಮಧ್ಯಂತರ ತಡೆ ನೀಡಿತ್ತು.

Exit mobile version