Site icon PowerTV

ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ನಾಲ್ವರು ಸಾವು

ಶಿರಸಿ: ಕಾರು ಮತ್ತು ಸರ್ಕಾರಿ ಬಸ್‌ನ ನಡುವೆ ಭೀಕರ ಅಪಘಾತ ನಡೆದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.

ಘಟನೆಯ ವಿವರ

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಬೆಳಗ್ಗೆ 11 ಗಂಟೆಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ತಮಿಳುನಾಡಿನ ವಿಳಾಸದವರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ವ್ಯವಹಾರದಲ್ಲಿ ನಾನು ಪಾಲುದಾರನಲ್ಲ: ಯತ್ನಾಳ್

ಬಸ್ಸಿನ (ಕೆಎ 31, ಎಫ್.1611) ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬಸ್‌ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರು ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಾರಿನಲ್ಲಿದ್ದ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Exit mobile version