Site icon PowerTV

ಲೀಲಾವತಿ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಿಎಂ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದೀಗ ಹಾಲಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಯಡಿಯೂರಪ್ಪ ಅವರು ಲೀಲಾವತಿ ಅಂತಿಮ ದರ್ಶನ ಪಡೆದಿದ್ದಾರೆ.

ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಈ ವೇಳೆ, ವಿನೋದ್‌ ರಾಜ್​ಗೆ ಸಿದ್ದರಾಮಯ್ಯ ಅವರು ಸಂತೈಸಿ ಧೈರ್ಯ ತುಂಬಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಲೀಲಾವತಿ ಅಂತಿಮ ದರ್ಶನದ ಬಳಿಕ ವಿನೋದ್‌ ರಾಜ್‌ಗೆ ಸಾಂತ್ವನ ಹೇಳಿದ್ದಾರೆ.

ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಕಲಾವಿದರು, ಆಪ್ತರು, ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅವರ ಅಂತ್ಯ ಸಂಸ್ಕಾರ ಮಧ್ಯಾಹ್ನ 3:30ಕ್ಕೆ ನೆರವೇರಲಿದೆ.

 

Exit mobile version