Site icon PowerTV

ಹಳೆ ವೈಷಮ್ಯಕ್ಕೆ ಹರಿದ ನೆತ್ತರು : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಂಡ್ಯ : ಹಳೆ ವೈಷಮ್ಯಕ್ಕೆ ಸಕ್ಕರೆ ನಾಡು ಮಂಡ್ಯದಲ್ಲಿ ನೆತ್ತರು ಹರಿದಿದೆ. ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ.

ಕಾರೆಕುರ ಗ್ರಾಮದ ಯೋಗೇಶ್ (34) ಮೃತ ಯುವಕ. ನಿನ್ನೆ ರಾತ್ರಿ ದುಷ್ಕರ್ಮಿಗಳು ಈತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಇಡೀ ಗ್ರಾಮ ಬೆಚ್ಚಿ ಬಿದ್ದಿದೆ.

ಮೃತ ಯೇಗೇಶ್ ಪೈಂಟ್ ಕೆಲಸ ಮಾಡಿಕೊಂಡಿದ್ದರು. ಯೋಗೇಶ್ ಜೊತೆ ಹಳೆ ವೈಷಮ್ಯ ಹೊಂದಿದ್ದವರು ನಿನ್ನೆ ರಾತ್ರಿ ಹತ್ಯೆಗೈದು ಪರಾರಿಯಾಗಿದ್ದಾರೆ. ಪರಿಚಿತರೇ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? : ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಶ್ರೀರಂಗಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದಿದ್ದಾರೆ.

ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

Exit mobile version