Site icon PowerTV

ಚತ್ತಿಸ್​ಘಡದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದಿಯೋ ಸಾಯ್​ ಆಯ್ಕೆ!

ಚತ್ತಿಸ್​ಘಡ್​: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯ್​ ಆಯ್ಕೆಯಾಗಿದ್ದಾರೆ.

ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ಚತ್ತಿಸ್​ಘಡದ ರಾಯಪುರದಲ್ಲಿ ನಡೆದ  ಶಾಸಕರ ಸಭೆಯಲ್ಲಿ ವಿಷ್ಣು ದಿಯೋ ಸಾಯ್​ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಮುಂದಿನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ತೆರೆಬಿದ್ದಿದೆ.

ಇದನ್ನೂ ಓದಿ: ತಮಿಳುನಾಡು, ಕೇರಳದಲ್ಲಿ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು ಅನುಮೋದಿಸಿದ್ದಾರೆ. ಛತ್ತೀಸ್ ಗಢದ ರಾಯ್ಘರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವಿಷ್ಣುದೇವ್ ಸಾಯಿ, ಪ್ರಧಾನಿ ಮೋದಿ ಅವರ ಮೊದಲ ಅವಧಿಯಲ್ಲಿ ಉಕ್ಕು ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

 

Exit mobile version