Site icon PowerTV

ಶೂ ಬಾಕ್ಸ್ ಕ್ಲೀನ್ ಮಾಡುವಾಗ ಜಾರಿದ ಕಾಲು : ಅಪಾರ್ಟ್​ಮೆಂಟ್​ನ 5ನೇ ಮಹಡಿಯಿಂದ ಬಿದ್ದು ನವವಿವಾಹಿತೆ ಸಾವು

ಬೆಂಗಳೂರು : ಶೂ ಬಾಕ್ಸ್​ ಕ್ಲೀನ್ ಮಾಡುವಾಗ ಅಪಾರ್ಟ್‌ಮೆಂಟ್​ನ 5ನೇ ಮಹಡಿಯಿಂದ ಆಯತಪ್ಪಿ ಬಿದ್ದು ನವವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ.

ಖುಷ್ಬೂ ಅಶೀಷ್ ತ್ರಿವೇದಿ(31) ಮೃತ ದುರ್ದೈವಿ. ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟ್‌ಮೆಂಟ್‌ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರಕ್ಕಸ ಅಲೆಗೆ ಎರಡು ಬಲಿ : ಸೋಮೇಶ್ವರ ಕಡಲಿಗಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಗಂಭೀರ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಖುಷ್ಬೂ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Exit mobile version