Site icon PowerTV

ಶ್ರವಣಬೆಳಗೊಳ ಅಭಿವೃದ್ಧಿಗೆ 9.25 ಕೋಟಿ ಬಿಡುಗಡೆ : ಸಿದ್ದರಾಮಯ್ಯ

ಬೆಂಗಳೂರು : ಶ್ರವಣಬೆಳಗೊಳದ ಜೈನರ ಪುಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ 9.25 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದು, ಜೈನ ಮತ್ತು ಸಿಖ್‌ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜೈನ ಮತ್ತು ಸಿಖ್‌ ಧರ್ಮದ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರ 30 ಕೋಟಿ ರೂಪಾಯಿ ಅನುದಾನ ಮೀಸಲಿರಿಸಿದೆ ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡಿದ್ದೇವೆ. 2023-24ನೇ ಸಾಲಿನಿಂದ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸಲಾಗಿದೆ. ಇದರಿಂದ ಸದರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ 2,196 ವಿದ್ಯಾರ್ಥಿಗಳಿಗೆ ಪ್ರವೇಶ ದೊರಕಿದ್ದು, ಮಕ್ಕಳ ಉಜ್ವಲ ಭವಿಷ್ಯದ ಕನಸಿಗೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದು ಹೇಳಿದ್ದಾರೆ.

Exit mobile version