Monday, August 25, 2025
Google search engine
HomeUncategorizedAadhaar Card: ಆಧಾರ್‌ ಕಾರ್ಡ್‌ ಉಚಿತ ತಿದ್ದುಪಡಿ ಅವಧಿ ವಿಸ್ತರಣೆಗೆ ಮತ್ತೊಂದು ಅವಕಾಶ

Aadhaar Card: ಆಧಾರ್‌ ಕಾರ್ಡ್‌ ಉಚಿತ ತಿದ್ದುಪಡಿ ಅವಧಿ ವಿಸ್ತರಣೆಗೆ ಮತ್ತೊಂದು ಅವಕಾಶ

ದೆಹಲಿ: ಆಧಾರ್‌ ಕಾರ್ಡ್‌ನಲ್ಲಿ ತಮ್ಮ ವಿವರಗಳನ್ನು ಯಾವುದೇ ಶುಲ್ಕವಿಲ್ಲದೆ ನವೀಕರಿಸಲು ಮತ್ತೊಂದು ಅವಕಾಶವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಕಾಲಾವಕಾಶವನ್ನು ಮತ್ತೊಮ್ಮೆ ವಿಸ್ತರಿಸಿದೆ.
ಹೌದು, ಯುಐಡಿಎಐ ಹೊರಡಿಸಿದ ಪ್ರಕಟಣೆಯಲ್ಲಿ “ಆಧಾರ್‌ ಕಾರ್ಡ್‌ನ ಮಾಹಿತಿಯನ್ನು ಉಚಿತವಾಗಿ ನವೀಕರಿಸಬಹುದಾದ ಸೌಲಭ್ಯವನ್ನು ಇನ್ನೂ 3 ತಿಂಗಳು ವಿಸ್ತರಿಸಲಾಗಿದೆ. ಅಂದರೆ 2024ರ ಮಾರ್ಚ್‌ 14ರವರೆಗೆ ಉಚಿತ ನವೀಕರಣಕ್ಕೆ ಅವಕಾಶವಿದೆ ಎಂದು ತಿಳಿಸಿದೆ.
ಈ ಸೇವೆಯು ಹಿಂದಿನಂತೆ ಮೈ ಆಧಾರ್ ಪೋರ್ಟಲ್‌ನಲ್ಲಿ ಮಾತ್ರ ಉಚಿತವಾಗಿದ್ದು, ಆಧಾರ್ ಕೇಂದ್ರಗಳಲ್ಲಿ 50 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಮುಂತಾದ ವಿವರಗಳನ್ನು ನವೀಕರಿಸಬಹುದು.
2024ರ ಮಾರ್ಚ್‌ 14ರ ನಂತರ ನೀವು ಶುಲ್ಕ ಪಾವತಿಸಿ ಅಪ್‌ಡೇಟ್‌ ಮಾಡಬೇಕಾಗುತ್ತದೆ ಎಂದು ಯುಐಡಿಎಐ ತಿಳಿಸಿದೆ.

ಇದನ್ನೂ ಓದಿ: ಕೆಸೆಟ್ 2023 ಪರೀಕ್ಷೆ ದಿನಾಂಕ ಮತ್ತೆ ಮುಂದೂಡಿಕೆ: ಮುಂದಿನ ದಿನಾಂಕ ಯಾವುದು?

ಆಧಾರ್‌ನ ಆಡಳಿತ ಮಂಡಳಿ ಯುಐಡಿಎಐ, ಪ್ರಜೆಗಳು ತಮ್ಮ ಆಧಾರ್ ವಿವರಗಳನ್ನು ಪ್ರತಿ 10 ವರ್ಷಗಳಿಗೊಮ್ಮೆ ನವೀಕರಿಸುವುದನ್ನು ಕಡ್ಡಾಯಗೊಳಿಸಿದೆ. ಮದುವೆ, ವಾಸಸ್ಥಾನ ಬದಲಾವಣೆ ಇತ್ಯಾದಿ ಜೀವನ ಘಟನೆಗಳಿಂದ ವ್ಯಕ್ತಿ ಹೆಸರು ಮತ್ತು ವಿಳಾಸದಂತಹ ಮೂಲಭೂತ ಜನಸಂಖ್ಯಾ ವಿವರಗಳನ್ನು ಬದಲಾಯಿಸಬೇಕಾಗಬಹುದು.

ವಿಳಾಸ ಮತ್ತು ಮೊಬೈಲ್ ಸಂಖ್ಯೆ ಹೊಸ ಸ್ಥಳಗಳಿಗೆ ವಲಸೆ ಹೋದಾಗ ಬದಲಾಗಬಹುದು. ಇದರ ಜತೆಗೆ ಮಕ್ಕಳ ಆಧಾರ್ ವಿವರಗಳನ್ನು ನವೀಕರಿಸಲು ಸರ್ಕಾರ ಈಗ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments