Site icon PowerTV

ಬೈಕ್‌ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು!

ಚಿತ್ರದುರ್ಗ : ಬೈಕ್‌ಗೆ ಕಾರು ಡಿಕ್ಕಿ,ಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ನಡೆದ ಭೀಕರ ಅಪಘಾತದಲ್ಲಿ, ಮೃತಪಟ್ಟವರನ್ನು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ.

ಅವರಿಬ್ಬರೂ ಉದ್ಯೋಗ ನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Exit mobile version