Site icon PowerTV

ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿ

ಮಂಡ್ಯ : ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಶುರುವಾರ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದೇಶವಳ್ಳಿ ಗ್ರಾಮದಲ್ಲಿ ನಡೆದಿದೆ.

ಮಧುಶ್ರೀ (32) ಮೃತ ದುರ್ದೈವಿ ಪತ್ನಿ. ಮಹದೇವ್(38) ರಾಡ್​​ನಿಂದ ಹೊಡೆದು ಪತ್ನಿಯನ್ನು ಕೊಲೆಗೈದಿರುವ ಪಾಪಿ ಪತಿ. ಕೊಲೆ ಬಳಿಕ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಇಬ್ಬರ ಜಗಳದಲ್ಲಿ ಮಗು ಅನಾಥವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಿನ್ನೆ (ಮಂಗಳವಾರ) ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ತಾರಕಕ್ಕೇರಿದ್ದು ಕೋಪಗೊಂಡ ಮಹದೇವ್, ರಾಡ್​​ನಿಂದ ಹೊಡೆದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಪೊಲೀಸ್ ಠಾಣೆಗೆ ತೆರಳಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಧುಶ್ರೀ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆರೋಪಿ ಮಹದೇವ್ ಚಾಲಕನಾಗಿದ್ದನು. ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಮಹದೇವ್, ಇದೇ ವಿಚಾರಕ್ಕೆ ಆಗಾಗ ಗಲಾಟೆ ಮಾಡುತ್ತಿದ್ದನು. ಇದರಿಂದ ಮನನೊಂದು ಮಧುಶ್ರೀ ತಾಯಿಯ (ತವರು) ಮನೆಯಲ್ಲಿ ಇದ್ದರು. ಬಳಿಕ ಹಿರಿಯರು ರಾಜಿ ಪಂಚಾಯಿತಿ ಮಾಡಿ ಎರಡು ತಿಂಗಳ ಹಿಂದೆ ಪುನಃ ಪತಿ ಮಹದೇವ್ ಮನೆಗೆ ಬಂದಿದ್ದರು. ಮತ್ತೆ ಹಳೆ ಚಾಳಿಯನ್ನು ಮುಂದುವರಿಸಿದ್ದ ಆರೋಪಿ ಆಕೆಯನ್ನು ಕೊಲೆಗೈದಿದ್ದಾನೆ.

Exit mobile version