Site icon PowerTV

ಬೆಳಗಾವಿಯಲ್ಲಿ ಪಂಚಮಸಾಲಿ ಲಿಂಗಾಯತರಿಂದ ಪ್ರತಿಭಟನೆ!

ಬೆಳಗಾವಿ: 2ಎ ಮೀಸಲಾತಿ ನೀಡುವ ವಿಷಯದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯಿತರು ಇಂದಿನಿಂದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ಬೆಳಗಾವಿಯಲ್ಲಿ ಚನ್ನಮ್ಮ ವೃತ್ತದಿಂದ ಸುವರ್ಣಸೌಧದವರೆಗೆ ಬೃಹತ್ ಪಾದಯಾತ್ರೆ ನಡೆಸಲೂ ನಿರ್ಧರಿಸಲಾಗಿದೆ. ಪಂಚಮಸಾಲಿ ಜಗದ್ಗುರು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಬಳಿಕ ಸುವರ್ಣ ಸೌಧದ ಬಳಿಯೇ ಬೃಹತ್ ಪ್ರತಿಭಟನೆ ನಡೆಸಲೂ ಸಹ ಉದ್ದೇಶಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ​​ ಭೋಜನ ಕೂಟ ಆಯೋಜನೆ ಮಾಡಿದ ಡಿಕೆಶಿ!

2ಎ ಮೀಸಲು ಸಂಬಂಧ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪಂಚಮ ಸಾಲಿ ಲಿಂಗಾಯಿತರ ನಿಯೋಗದೊಂದಿಗೆ ಸಭೆ ನಡೆಸಿದ್ದರು. ಆದರೆ, 2 ಮೀಸಲು ನೀಡುವ ಬಗ್ಗೆ ಸರ್ಕಾರ ತನ್ನ ಸ್ಪಷ್ಟನಿರ್ಧಾರ ತಿಳಿಸಿಲ್ಲ. ಹಾಗಾಗಿ ತಾವು ಹೋರಾಟ ತೀವ್ರಗೊಳಿಸುವುದು ಅನಿವಾರ್ಯ ಎಂದು ನಿನ್ನೆ ಜಯಬಸವ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದರು.

Exit mobile version