Site icon PowerTV

ಶಾಲೆ ಮುಂದೆ ಮದ್ಯಸೇವನೆ: ಕೇಳಿದಕ್ಕೆ ಯುವಕನನ್ನೇ ಕೊಲೆಗೈದ ಹಂತಕರು 

ಮಂಗಳೂರು: ಶಾಲೆಯ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದವರನ್ನ ಪ್ರಶ್ನಿಸಿದ್ದಕ್ಕೆ ಯುವಕನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.

ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ (28) ಕೊಲೆಯಾದ ಯುವಕನಾಗಿದ್ದಾನೆ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆಯುತ್ತಿದ್ದರು ಇದನ್ನೂ ಕೇಳಿದಕ್ಕೆ ಆತನನ್ನೇ ಕೊಲೆ ಮಾಡಿದ್ಧಾರೆ.

ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿ ಮಾಡಿದ್ದು,ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. 

ಇದನ್ನೂ ಓದಿ: ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್‌; ಗಂಡನ ಸಾಲ ತೀರಿಸಲು ಅತ್ತೆ, ಮಾವನನ್ನೇ ಕೊಂದ ಕಿಲ್ಲರ್ ಸೊಸೆ 

ಗಂಭೀರ ಗಾಯಗೊಂಡ ವರುಣ್‌ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Exit mobile version