Site icon PowerTV

ಕಿಲ್ಲರ್ ಬಿಎಂಟಿಸಿಗೆ ಗೃಹಿಣಿ ಬಲಿ!

ಬೆಂಗಳೂರು:  ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರ ಹರಿದ ಪರಿಣಾಮ ಗೃಹಿಣಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಸೀಮಾ ಮೃತ ದುರ್ದೈವಿ. ಅದೃಷ್ಟವಶಾತ್ ಎರಡು ವರ್ಷದ ಮಗು ಗಾನವಿ ಮತ್ತು ಪತಿ ಗುರುಮೂರ್ತಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಪತಿ ಗುರುಮೂರ್ತಿ ಸಿಂಗಸಂದ್ರ ಬೆಸ್ಕಾಂ ಉದ್ಯೋಗಿಯಾಗಿದ್ದು, ಕಳೆದ 8 ವರ್ಷದಿಂದ ಬೆಸ್ಕಾಂನಲ್ಲಿ ಲೈನ್‌ಮೆನ್ ಆಗಿ‌‌ ಕೆಲಸ ನಿರ್ವಹಿಸುತ್ತಿದ್ದಾರೆ. ಮೂಲತಃ ವಿಜಯನಗರ ಜಿಲ್ಲೆಯ ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಯಾಗಿದ್ದಾರೆ. ಉದ್ಯೋಗ ನಿಮಿತ್ತ ಈ ದಂಪತಿ ಬೆಂಗಳೂರಿಗೆ ಬಂದು‌ ನೆಲೆಸಿದ್ದರು.

ಇದನ್ನೂ ಓದಿ: ಸ್ಮೋಕ್​ ಬಾಂಬ್ ದಾಳಿ ಬೆನ್ನಲ್ಲೆ ಬೆಳಗಾವಿ ಸುವರ್ಣ ಸೌಧ ಸುತ್ತ ಕಟ್ಟೆಚ್ಚರ!

ಸದ್ಯ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಲಾಗುತ್ತದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ಬಳಿಕ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version