Site icon PowerTV

ಶಿರಾದಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ತುಮಕೂರು: ಕಾರು ಚಾಲಕನ ಅಜಾಗರೂಕ ಚಾಲನೆಗೆ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಭೀಕರ ಅಪಘಾತ ನಡೆದಿದ್ದು, ಹಿಂಬದಿಯಿಂದ ಕಾರು ಗುದ್ದಿದ್ದರಿಂದ ಬೈಕ್‌ ಸವಾರರು ಕೊನೆಯುಸಿರೆಳೆದಿದ್ದಾರೆ.
ಜೋಗಿಹಳ್ಳಿಯ ಶ್ರೀಧರ್ (28), ಮುನಿರಾಜು (25) ಮೃತ ಯುವಕರು. ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜುನನ್ನು ಚಿಕಿತ್ಸೆಗೆಂದು ಬೈಕ್‌ನಲ್ಲಿ ಕರೆದುಕೊಂಡು ಹೋಗುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರು ಬೈಕ್‌ಗೆ ಗುದ್ದಿದ ಬಳಿಕ ಸುಮಾರು 200 ಮೀ. ದೂರ ಎಳೆದುಕೊಂಡು ಹೋಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತ ನಡೆದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

 

Exit mobile version