Site icon PowerTV

ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ನೀಡುತ್ತೇನೆ : ಸಿದ್ದರಾಮಯ್ಯ

ಬೆಳಗಾವಿ : ಮುಂದಿನ ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರಸವೆ ನೀಡಿದ್ದಾರೆ.

ವಿಧಾನಮಂಡಲದಲ್ಲಿ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಪೂರ್ತಿ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟಕದ 5 ತಾಲೂಕುಗಳು ಸೇರಿದಂತೆ ಹಿಂದುಳಿದ, ಅತೀ ಹಿಂದುಳಿದ ತಾಲೂಕುಗಳಿಗೂ ಅನುದಾನ ಕೊಡಲಾಗುವುದು ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877,36 ಕೋಟಿ ರೂ. ಮೀಸಲಿಡಲಾಗಿದೆ. 10,280 ಕೋಟಿ ರೂ. ಬಿಡುಗಡೆಯಾಗಿದ್ದು ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲೂಕುಗಳಿಗೂ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧ

ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ. ಆದರೆ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ. ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ ಎಂದು ಪ್ರತ್ಯೇಕ ರಾಜ್ಯದ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

Exit mobile version