Site icon PowerTV

ಟಿಪ್ಪು ಹೆಸರಿಡಲು ಯಾವುದೇ ಕಾರಣಕ್ಕೂ ಬಿಡಲ್ಲ : ಸಂಸದ ಪ್ರತಾಪ್ ಸಿಂಹ

ಮೈಸೂರು : ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವ ತೀರ್ಮಾನವನ್ನು ಬಿಜೆಪಿ ಸರ್ಕಾರವಿದ್ದಾಗಲೇ ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಹೆಸರಿಡಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವ ಬಗ್ಗೆ ಕಾಂಗ್ರೆಸ್ ಸರಕಾರ ಚರ್ಚೆ ಶುರು ಮಾಡಿದೆ. ಆದರೆ, ಇಂಥದ್ದೊಂದು ಚರ್ಚೆ ಮತ್ತು ಪ್ರಸ್ತಾವನೆ ಅಸಂಬದ್ಧ ಎಂದು ಕುಟುಕಿದ್ದಾರೆ.

ಈಗಾಗಲೇ ಕಾನೂನಾತ್ಮಕವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಮತ್ತೆ ರಾಜ್ಯ ಕಾಂಗ್ರೆಸ್ ಸರ್ಕಾರ ಟಿಪ್ಪು ಹೆಸರು ಪ್ರಸ್ತಾಪ ಮಾಡುತ್ತಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.

Exit mobile version