Site icon PowerTV

ಹೊಸ ವರ್ಷಕ್ಕೆ ನಂದಿನಿ ಹಾಲು ದರ ಏರಿಕೆ!

ಬೆಂಗಳೂರು: ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ ಸರ್ಕಾರ ದರ ಏರಿಸುವ ಸುಳಿವು ನೀಡಿದೆ.

ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ ಹೇಳಿದೆ. ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ.ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೆ ಖಾಸಗಿ ಬ್ರ್ಯಾಂಡ್‌ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್‌ಗಳ ದರ 10-12 ರೂಪಾಯಿ ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಒಡೆದು ಹಾಕ್ತೀವಿ, ಬಾಬ್ರಿ ಮಸೀದಿ ಮತ್ತೆ ಕಟ್ತೀವಿ : ವಿವಾದಾತ್ಮಕ ಹೇಳಿಕೆ ವೈರಲ್

ಇದರೊಂದಿಗೆ ಹೊಸವರ್ಷಕ್ಕೆ ನಂದಿನ ಹಾಲಿನ ಉತ್ಪನ್ನಗಳ ಮೇಲಿನ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗುವುದಂತು ಗ್ಯಾರೆಂಟಿಯಾಗಿದೆ.

Exit mobile version