Site icon PowerTV

ಸಿಲಿಂಡರ್ ಸ್ಫೋಟಕ್ಕೆ 9 ತಿಂಗಳ ಮಗು ಸೇರಿ 7 ಮಂದಿಗೆ ಗಂಭೀರ ಗಾಯ!

ಬೆಳಗಾವಿ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿಯ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ.

ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿತ್ತು. ಈ ವೇಳೆ ಗ್ಯಾಸ್ ವಾಸನೆಗೆ ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಮನೆಯ ಹಂಚು ಹಾರಿ ಹೋಗಿದೆ. ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಘಟನೆಯಲ್ಲಿ ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ, ದೀಪಾ, ನವೀನ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ವಿಷ್ಣು ಪುಣ್ಯಭೂಮಿ ಆಗ್ಬೇಕು: ಕಿಚ್ಚ ಸುದೀಪ್

ಈ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Exit mobile version