Site icon PowerTV

ವಿಷ್ಣು ಸ್ಮಾರಕ ನಿರ್ಮಾಣ ಹೋರಾಟಕ್ಕೆ ನಟ ಡಾಲಿ ಧನಂಜಯ ಸಾಥ್​!

ಬೆಂಗಳೂರು: ಕನ್ನಡದ ಮೇರು ನಟ ಡಾ.ವಿಷ್ಣುವರ್ಧನ್​ ಅಗಲಿ 14 ವರ್ಷಗಳು ಕಳೆದಿದ್ದರು ಇದುವೆರೆಗೂ ವಿಷ್ಣು ಅವರ ಸ್ಮಾರಕ ನಿರ್ಮಾಣವಾಗ ಹಿನ್ನೆಲೆ ಇಂದು ಬೆಂಗಳೂರಿನ ಫ್ರಿಡಂ ಪಾರ್ಕ್​​​​​ನಲ್ಲಿ ವಿಷ್ಣುವರ್ಧನ್ ಅಭಿಮಾನಿಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ವಿಷ್ಣುವರ್ಧನ್ ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ ಸಾಥ್​ ನೀಡಿದ್ದಾರೆ.

ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಹೋರಾಟ ನಡೆಯುತ್ತಿದ್ದು ಈ ಹೋರಾಟಕ್ಕೆ ಹಲವು ಸಂಘಟನೆಗಳು ಸಾಥ್ ನೀಡಿದೆ. ಈ ಹಿನ್ನೆಲೆ ಸ್ಯಾಂಡಲ್​ ವುಡ್ ನಟ ಡಾಲಿ ಧನಂಜಯ ಅವರು ಕೂಡ ಬೆಂಬಲವನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ವಿಷ್ಣು ಪುಣ್ಯಭೂಮಿ ಆಗ್ಬೇಕು: ಕಿಚ್ಚ ಸುದೀಪ್

ಕನ್ನಡ ಚಿತ್ರರಂಗದ ಮೇರ ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ ಎಂದು ತಮ್ಮ X ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ.

Exit mobile version