Saturday, August 30, 2025
HomeUncategorized60 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

60 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

ಮಡಿಕೇರಿ: ಇಂದಿನಿಂದಲೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ.ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 
ನಗರದಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ ಎಂದರು.
ಇನ್ನೂ ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ಕೋಡಲಾಗಿದೆ.

ಉಸಿರಾಟದ ತೊಂದರೆ, ಇತರ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಲಾಗುತ್ತದೆ. ಆಗ ತಿಳಿಯುತ್ತದೆ ಕೋವಿಡ್ ದಿನಕ್ಕೆ ಹೆಚ್ಚು ಇದೆಯೇ ಅಥವಾ ಕಡಿಮೆ ಇದೆಯೇ ಎಂದು. ಆಗ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಈಗ ಆ ಹಂತದಲ್ಲಿ ಇದೆ. ಗಡಿ ಭಾಗದಲ್ಲಿ ಟೆಸ್ಟಿಂಗ್ ಹೆಚ್ಚು ಮಾಡುತ್ತೇವೆ. ಯಾರ ಯಾರ ಮೇಲೆ ಸಂಶಯ ಇದೆ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ ಎಂದು ತಿಳಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments