Site icon PowerTV

ಎತ್ತಿನಹೊಳೆ ಯೋಜನೆ ಎರಡು ವರ್ಷದೊಳಗೆ ಪೂರ್ಣ: ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರು: ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ಮತ್ತೆ ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು,ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ ಎಂದರು.

Exit mobile version