Site icon PowerTV

ಕಾರಿನಲ್ಲಿ ಬಂದು ಗೋ ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹಸುಗಳ್ಳತನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗ ಸಕ್ರೆಬೈಲು ಸಮೀಪ ತುಂಬು ಗರ್ಭಿಣಿಯಾಗಿದ್ದ ಹಸುಗಳನ್ನ ಕಾರಿನಲ್ಲಿ ಕದ್ದೊಯ್ಯಲಾಗಿದೆ.

ಈ ಘಟನೆ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿನ ನಿವಾಸಿಯೊಬ್ಬರು ಕೊಟ್ಟಿಗೆಯಲ್ಲಿ ಕಟ್ಟಿದ್ದ ಒಟ್ಟು 4 ಹಸುಗಳನ್ನ ಕಳ್ಳತನ ಮಾಡಿದ್ದಾರೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾರೊಂದರಲ್ಲಿ ಬಂದ ದುಷ್ಕರ್ಮಿಗಳು, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಕೃತ್ಯವೆಸಗಿದ್ದಾರೆ. ದನಕ್ಕೆ ಬಾಳೆಹಣ್ಣು ಹಾಕುವಂತೆ ಮಾಡಿ ಅದನ್ನ ಹಿಡಿದು ಕಾರಿನೊಳಕ್ಕೆ ತುರುಕಿಕೊಂಡು ಎಸ್ಕೇಪ್ ಆಗಿದ್ದಾರೆ. ಇನ್ನು ಸ್ಥಳೀಯ ನಿವಾಸಿಗಳಲ್ಲಿ ಈ ಘಟನೆ ಆತಂಕ ಮೂಡಿಸಿದೆ.

ಕಷ್ಟಪಟ್ಟು ಸಾಕಿದ್ದ ಮೂಕಪ್ರಾಣಿಗಳನ್ನ ಹೊತ್ತುಕೊಂಡು ಹೋಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಘಟನೆ ಬೆನ್ನಲ್ಲೇ ಸ್ಥಳೀಯರು ಕಾರಿನ ಮೂಲ ಹಾಗೂ ಕಳ್ಳರನ್ನ ಗುರುತಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಸಿಸಿ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಯಾಗಿದ್ದು, ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

Exit mobile version