Site icon PowerTV

ವ್ಯಕ್ತಿಯೋರ್ವನಿಗೆ ಕೊರೊನಾ ಪಾಸಿಟಿವ್: ಮದ್ದೂರಿನಲ್ಲಿ ವರ್ಷದ ಮೊದಲ ಕೇಸ್ ಪತ್ತೆ

ಮಂಡ್ಯ: ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಕೇರಳದಲ್ಲಿ ಕೊರೊನಾ ರೂಪಾಂತರಿ JN.1 ಕೇಸ್ಪ ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ

ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಕೇಸ್ ಆಗಿದೆ. ಜೊತೆಗೆ 25% ಗಿಂತ ಅಧಿಕ ಪ್ರಮಾಣದಲ್ಲಿ ಅವರ ಸ್ಕೋರಿಂಗ್ ಹೆಚ್ಚಿರುವ ಕಾರಣ ILI ಸ್ಯಾರಿ ಕೇಸ್‌ ಸಂಬಂಧ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳಿಸಿಲ್ಲ. ಸದ್ಯ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದಾರೆ.

 

Exit mobile version