Site icon PowerTV

ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸಮಿತಿ ಶಿಫಾರಸು!

ದೆಹಲಿ: ತಮಿಳುನಾಡಿಗೆ 2024ರ ಜನವರಿಯಲ್ಲಿ ಮತ್ತೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.

ಡಿಸೆಂಬರ್ ಅಂತ್ಯದವರೆಗೆ ಪ್ರತಿ ದಿನ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಆದರೂ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ನೀರು ಹರಿಸುವಂತೆ ಹೇಳಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ತಮ್ಮ ಹೆಸರು ಕೈ ಬಿಡುವಂತೆ ಕೋರಿ ಜಾಕ್ವೆಲಿನ್ ಕೋರ್ಟ್​ಗೆ ಅರ್ಜಿ!

ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿರುವುದು ರಾಜ್ಯದ ಜನತೆಗೆ ಆಕ್ರೋಶಕ್ಕೆ ಕಾರಣವಾಗಿದೆ.

Exit mobile version