Site icon PowerTV

ಲಾರಿಗೆ ಕಾರು ಡಿಕ್ಕಿ: ಅಮೆಜಾನ್‌ ಕಂಪನಿ ಮ್ಯಾನೇಜರ್‌ ಸ್ಥಳದಲ್ಲೇ ಸಾವು

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ವ್ಯಕ್ತಿ ಸಾವನಪ್ಪಿರುವ ಘಟನೆ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.

ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್‌ ಎಂಬವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸಂತೋಷ್‌ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನೈಸ್‌ ರಸ್ತೆ ಜಂಕ್ಷನ್‌ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು‌ ಸಂಪೂರ್ಣ ಜಖಂ ಆಗಿದ್ದು ಸಂತೋಷ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಬೆಳ್ಳಗ್ಗೆ ಬೆಳಕಿಗೆ ಬಂದಿದೆ.

ಸಂತೋಷ್‌ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

 

Exit mobile version