Site icon PowerTV

ಇನ್ಮುಂದೆ ಸಾರಿಗೆ ಬಸ್ ನಲ್ಲಿ ಮಾಸ್ಕ್​ ಕಡ್ಡಾಯ: ಸಚಿವ ರಾಮಲಿಂಗಾರೆಡ್ಡಿ!

ಬೆಂಗಳೂರು: ಒಮಿಕ್ರಾನ್​ ರೂಪಾಂತರಿ JN.1 ಪ್ರಕರಣಗಳು ನೆರೆಯ ಕೇರಳ, ಗೋವಾ, ಮಹಾರಾಷ್ಟ್ರ ಗಳಲ್ಲಿ ಪತ್ತೆಯಾಗಿದ್ದು ರಾಜ್ಯದಲ್ಲೂ ಕೋವಿಡ್​ ಭೀತಿ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಲವೊಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ ಅವರು, JN.1 ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗದಂತೆ ತಡೆಗಟ್ಟಲು ರಾಜ್ಯ ಸಾರಿಗೆ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ನಿತ್ಯ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ತಿಳಿಸಿದ್ದಾರೆ.

ಇದನ್ನೂ ಒದಿ: ಕೊರೋನಾ ಬಂದ್ರೆ 10 ದಿನ ಹೋಂ ಕ್ವಾರಂಟೈನ್​: ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​

ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡ್ತೇವೆ, ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ ಅದರಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ.

ಇನ್ನು ಮುಂದೆ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಬೇಕು. ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸೂಚನೆ ನೀಡಲಾಗಿದೆ. ಇನ್ನೂ ಬಿಎಂಟಿಸಿ ಬಸ್ ಗಳಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಕಡ್ಡಾಯ ಎಂದು ಅವರು ಹೇಳಿದ್ದಾರೆ.

Exit mobile version