Site icon PowerTV

ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್

ಬೆಂಗಳೂರು : ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರಾಳರಾಗಿದ್ದಾರೆ.

ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮೇಲೆ ದಾಖಲಾಗಿದ್ದ 40 ಲಕ್ಷ ರೂ. ಲಂಚ ಸ್ವೀಕಾರದ ಲೋಕಾಯುಕ್ತ ಪ್ರಕರಣವನ್ನು ಹೈಕೋರ್ಟ್‌ ಏಕ ಸದಸ್ಯ ಪೀಠವು ರದ್ದುಗೊಳಿಸಿ ಇಂದು ಆದೇಶ ನೀಡಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಪಡೆಯದೇ ಪ್ರಕ್ರಿಯೆ ಮುಂದುವರಿಸಿದ್ದಾರೆ ಎಂದು ಆರೋಪಿ ಪರ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.

ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಎಂಟು ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ, ಕೆಎಸ್​ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ಅವರನ್ನೂ ಲಂ ಪಡೆದ ಆರೋಪದಲ್ಲಿ ಬಂಧಿಸಲಾಗಿತ್ತು. ಈ ಹಣಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಹೇಳಿಕೊಂಡಿದ್ದರು.

ಈಗ ನ್ಯಾಯಾಲಯ 40 ಲಕ್ಷ ರೂ. ನಗದು ಹಣದ ಸಮೇತವಾಗಿ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಸಿಕ್ಕಿಬಿದ್ದ ಪ್ರಕರಣದಲ್ಲಿ ಮಾಜಿ ಶಾಸಕರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

Exit mobile version