Site icon PowerTV

ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ಪ್ರತಿಭಟನೆ!

ದೆಹಲಿ: ಸಂಸದರನ್ನುಅಮಾನತಿನಲ್ಲಿ ಇರಿಸಿರುವುದನ್ನು ಖಂಡಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ನಾಳೆ ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸಂಸತ್​ನ 143 ಸಂಸದರನ್ನು ಅಮಾನತಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಇಂದೂ ಕೂಡ ಪ್ರತಿಭಟನೆ ನಡೆಸಿದೆ. ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗೆ ರ್ಯಾಲಿ ನಡೆಸಿದ ವಿರೋಧ ಪಕ್ಷದ ಸಂಸದರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಕೊರೊನಾ ಆತಂಕ: ಆರೋಗ್ಯ ಇಲಾಖೆ ಗೈಡ್​ಲೈನ್​ ನಂತೆ ಶಾಲೆಗಳಿಗೆ ನೋಟೀಸ್​-ಮಧು ಬಂಗಾರಪ್ಪ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಬೇರೆ ಎಲ್ಲಿಯೋ ಮಾತನಾಡಿದ್ದಾರೆ. ಆದರೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂದು ಟೀಕಿಸಿದ್ದಾರೆ. ಸಂಸತ್‌ ಭದ್ರತಾ ಉಲ್ಲಂಘನೆಯಂತಹ ಗಂಭೀರ ವಿಚಾರಗಳನ್ನು ನಾವು ಪ್ರಶ್ನೆ ಮಾಡಿದ್ದೇವೆ. ಪ್ರಧಾನಿ ಹಾಗೂ ಗೃಹ ಸಚಿವರು ಇದಕ್ಕೆ ಸಮಗ್ರ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version