Site icon PowerTV

ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಬಟ್ಟೆ ಹಾಕುವುದು, ಊಟ ಮಾಡುವುದು ಅವರವರಿಗೆ ಬಿಟ್ಟ ವಿಚಾರ. ಅದನ್ನು ನಾನ್ಯಾಕೆ ಅಡ್ಡಿಪಡಿಸಲಿ ಎಂದ ಅವರು ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಮಹತ್ವದ ಹೇಳಿಕೆ ನೀಡಿದ್ದಾರೆ.

ನಾನು ಧೋತಿ ಮತ್ತು ಜುಬ್ಬಾ ಹಾಕಿಕೊಳ್ಳುತ್ತೇನೆ. ಅದು ನನ್ನ ಇಷ್ಟ. ಇನ್ನೊಬ್ಬ ಪ್ಯಾಂಟು ಹಾಗೂ ಶರ್ಟ್‌ ಹಾಕಿಕೊಳ್ಳುತ್ತಾನೆ. ಅದು ಅವನ ಇಷ್ಟ, ಅದರಲ್ಲಿ ತಪ್ಪೇನಿದೆ? ಹಿಜಾಬ್ ನಿಷೇಧದ ಆದೇಶ ವಾಪಸ್ ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದ್ದೇನೆ. ನಮ್ಮ ಸರ್ಕಾರ ಎಲ್ಲ ಬಡವರು, ಅಲ್ಪಸಂಖ್ಯಾತರು, ದಲಿತರಿಗೆ ನ್ಯಾಯ ನೀಡಲು ಶ್ರಮಿಸುತ್ತಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಜಾಬ್ ನಿಷೇಧ ವಾಪಾಸ್ ಪಡೆಯಲು ಹೇಳಿದ್ದೇನೆ

ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವುದು ಕೇವಲ ಬೋಗಸ್ ಅಷ್ಟೇ. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವುದು, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Exit mobile version