Site icon PowerTV

ಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯ

ಬೆಂಗಳೂರು : ಮೊಟ್ಟ ಮೊದಲ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ಆಧಾರದ ಹುದ್ದೆಗಳಲ್ಲಿ ಮೊಟ್ಟ ಮೊದಲ ಬಾರಿಗೆ ಮೀಸಲಾತಿ ಪದ್ದತಿಯನ್ನು ಅನುಸರಿಸುವ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ ಹಾಗೂ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅವಶ್ಯವಿರುವ 347 ಗ್ರೂಪ್‌ ಡಿ ನೌಕರರು ಮತ್ತು 102 ಡೇಟಾ ಆಪರೇಟರ್‌ ಗಳು ಸೇರಿದಂತೆ ಒಟ್ಟು 449 ಹುದ್ದೆಗಳ ಸೇವೆಯನ್ನು ರೂ.11 ಕೋಟಿ ವೆಚ್ಚದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪಡೆಯಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Exit mobile version